"ಹಕ್ಕಿಯ ಹಾಡಿಗೆ ತಲೆದೂಗುವ ಹೂ ನಾನಾಗುವ ಅಸೆ ಹಸುವಿನ ಕೊರಳಿನ ಗೆಜ್ಜೆಯ ದನಿಯು ನಾನಾಗುವ ಅಸೆ
ಹಬ್ಬಿನ ಕಾಮನ ಬಿಲ್ಲಿನ ಮೇಲಿನ ಮುಗಿಲಾಗುವ ಅಸೆ
ಚಿನ್ನದ ಬಣ್ಣದ ಜಿಂಕೆಯ ಕಣ್ಣಿನ ಮಿಂಚಾಗುವ ಅಸೆ
ತೋಟದ ಕಂಪಿನ ಉಸಿರಲಿ ತೇಲುವ ಜೇನಾಗುವ ಅಸೆ
ಕಡಲಿನ ನೀಲಿಯ ನೀರಲಿ ಬಳುಕುವ ಮೀನಾಗುವ ಅಸೆ
ಸಿಡಿಲನು ಕಾರುವ ಬಿರುಮಳೆಗಂಜದೆ ಮುನ್ನಡೆಯುವ ಅಸೆ
ನಾಳೆಯ ಬದುಕಿನ ಇರುಳಿನ ತಿರುವಿಗೆ ದೀಪವನಿಡುವಾಸೆ
ಮಣ್ಣಿನ ಕೊಡುಗೆಗೆ ನೋವಿಗೆ ನಲಿವಿಗೆ ಕನ್ನಡಿ ಹಿಡಿವಾಸೆ
ಮಾನವ ಹ್ರದಯದ ಕರುಣೆಗೆ ಒಲವಿಗೆ ದನಿಗೂಡಿಸುವಾಸೆ" - ಶ್ರೀ ಕೆ ಎಸ್ ನರಸಿಂಹಸ್ವಾಮಿ
ವೈವಾಹಿಕ ಜೀವನದ ಮೂಲಾಧಾರವೆನ್ನುವ ದಾಂಪತ್ಯ ಪ್ರೀತಿಯನ್ನು ಸುಮಧುರಾವಾಗಿ ಸರಳ ಕನ್ನಡ ಭಾಷೆಯಲ್ಲಿ ಪೋಣಿಸಿದ ಈ ಮಹಾ ಪ್ರೇಮಕವಿಯ ಆಸೆ ಏನೆಂಬುದುನ್ನು ಈ ಪುಟ್ಟ ಕವನದಲ್ಲಿ ಕಾಣಬಹುದು.